ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ತಿಳಿಸುತ್ತಿರುವ ವಿಷಯ ಏನೆಂದರೆ 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು 11ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅನ್ನು ಸರ್ಕಾರದ ವತಿಯಿಂದ 10ನೇ ತರಗತಿ ಪಾಸಾದಂತಹ ರೈತರ ಮಕ್ಕಳಿಗೆ ನೀಡಲಾಗುತ್ತಿದ್ದು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಅದರಂತೆ ಏನಿಲ್ಲ ಅರ್ಹತೆಗಳನ್ನು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.
ರೈತ ವಿದ್ಯಾನಿಧಿ ಸ್ಕಾಲರ್ಶಿಪ್ :
ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆ ಮೂಲಕ 10ನೇ ತರಗತಿ ಪಾಸಾದ ರೈತರ ಮಕ್ಕಳು 11 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ರೈತ ವಿದ್ಯಾ ನಿಧಿ ಸ್ಕಾಲರ್ಶಿಪ್ ಗೆ ರೈತರ ಮಕ್ಕಳು ರಾಜ್ಯ ಸರ್ಕಾರದ ಎಸ್ ಎಸ್ ಬಿ ಪೋರ್ಟಲ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಈ ಮೂಲಕ ವಿದ್ಯಾರ್ಥಿಗಳು 11,000 ವಿದ್ಯಾರ್ಥಿ ವೇತನವನ್ನು ಪಡೆದು ತಮ್ಮ ವಿದ್ಯಾಭ್ಯಾಸವನ್ನು ಸುಲಭವಾಗಿ ಮುಂದುವರಿಸಬಹುದು.
ಇದನ್ನು ಓದಿ : ಕೇಂದ್ರ ಸರ್ಕಾರದ ಈ ಒಂದು ಯೋಜನೆಯಲ್ಲಿ ಬಡವರಿಗೆ ಸಿಗಲಿದೆ 10 ಲಕ್ಷ ಈ ಕೂಡಲೇ ಅರ್ಜಿ ಸಲ್ಲಿಸಿ
ವಿದ್ಯಾರ್ಥಿ ವೇತನದ ವಿವರ :
ರಾಜ್ಯ ಸರ್ಕಾರ ನೀಡುತ್ತಿರುವ ಈ ವಿದ್ಯಾರ್ಥಿ ವೇತನದ ವಿವರವನ್ನು ಈ ಕೆಳಗಿನಂತೆ ನೋಡಬಹುದಾಗಿದ್ದು ಯಾವ ವಿದ್ಯಾರ್ಥಿಗಳಿಗೆ ಎಷ್ಟು ಹಣವನ್ನು ನೀಡಲಾಗುತ್ತದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ,
- ರೂ.2000 ಸ್ಕಾಲರ್ಶಿಪ್ 10ನೇ ತರಗತಿ ವಿದ್ಯಾರ್ಥಿಗಳಿಗೆ
- 2500 ಸ್ಕಾಲರ್ಶಿಪ್ ಪಿಯುಸಿ ಮತ್ತು ಐಟಿಐ ಮತ್ತು ಡಿಪ್ಲೋಮೋ ವಿದ್ಯಾರ್ಥಿಗಳಿಗೆ
- 5,000 ಸ್ಕಾಲರ್ಶಿಪ್ ಪದವಿ ವಿದ್ಯಾರ್ಥಿಗಳಿಗೆ
- 7,000 ಸ್ಕಾಲರ್ಶಿಪ್ ಎಲ್ ಎಲ್ ಬಿ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ
- 11 ಸಾವಿರ ಸ್ಕಾಲರ್ಶಿಪ್ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ
ಹೀಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರ ನೀಡುತ್ತದೆ.
ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ರೈತರ ಮಕ್ಕಳಿಗಾಗಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ,
- ಹಿಂದಿನ ತರಗತಿಯ ಅಂಕಪಟ್ಟಿ
- ಮೊಬೈಲ್ ನಂಬರ್
- ಆಧಾರ್ ಕಾರ್ಡ್
- ಕಾಲೇಜಿನ ಶುಲ್ಕ ಕಟ್ಟಿದ ರಶೀದ್ ಹಿ
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್
ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://ssp.postmatric.karnataka.gov.in/ಈ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಸುಲಭವಾಗಿ ಆನ್ಲೈನ್ ನಲ್ಲಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿಯನ್ನು ಸಲ್ಲಿಸಿದ ನಂತರ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಯೋಜನೆಯ ಮೂಲಕ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.
ಒಟ್ಟಾರೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ವಿದ್ಯಾರ್ಥಿ ವೇತನಗಳನ್ನು ನೀಡುತ್ತಿದ್ದು ಇದೀಗ ರೈತರ ಮಕ್ಕಳಿಗಾಗಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುವ ಸಲುವಾಗಿ ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು ಈ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಬಹುದಾಗಿದೆ.
ಹಾಗಾಗಿ ನಿಮಗೆ ತಿಳಿದಿರುವ ಎಲ್ಲ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ಕೂಡ ರಾಜ್ಯ ಸರ್ಕಾರ ನೀಡುತ್ತಿರುವ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಸರ್ಕಾರದಿಂದ 11,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲಿ ಧನ್ಯವಾದಗಳು.