ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹೊಸ ನೇಮಕಾತಿ ಅಧಿಸೂಚನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇದೀಗ ಕರ್ನಾಟಕ ಸರ್ಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ.
ಅಲ್ಲದೆ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಎಷ್ಟು ಹುದ್ದೆಗಳು ಖಾಲಿ ಇವೆ, ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ವೇತನ ಶ್ರೇಣಿ ವಿದ್ಯಾರ್ಹತೆ, ಅರ್ಜಿ ಶುಲ್ಕದ ವಿವರ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಹುದ್ದೆಗಳು:
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಸರ್ಕಾರವು ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಹನು ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾದ ವಿವರವನ್ನು ನೋಡುವುದಾದರೆ.
ಇಲಾಖೆಯ ಹೆಸರು | ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ |
ಖಾಲಿ ಇರುವ ಹುದ್ದೆಗಳ ಸಂಖ್ಯೆ | 28 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
ಅರ್ಜಿ ಸಲ್ಲಿಸುವ ಲಿಂಕ್ | https://kla.kar.nic.in/council/career.htm |
ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿ |
- ಇಲಾಖೆಯ ಹೆಸರು : ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ
- ಖಾಲಿ ಇರುವ ಹುದ್ದೆಗಳ ಸಂಖ್ಯೆ : 28
- ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮುಖಾಂತರ
ಹುದ್ದೆಗಳ ವಿವರ :
- 2 ಹುದ್ದೆಗಳು ಸೀನಿಯರ್ ಪ್ರೋಗ್ರಾಮ್
- 2 ಹುದ್ದೆಗಳು ಜೂನಿಯರ್ ಪ್ರೋಗ್ರಾಮ್
- 2 ಹುದ್ದೆಗಳು ಜೂನಿಯರ್ ಕನ್ಸೋಲ್ ಆಪರೇಟರ್
- 4 ಹುದ್ದೆಗಳು ಕಂಪ್ಯೂಟರ್ ಆಪರೇಟರ್
- 8 ಹುದ್ದೆಗಳು ಕಿರಿಯ ಸಹಾಯಕರು
- 5 ಹುದ್ದೆಗಳು ಬೆರಳಚ್ಚುಗಾರರು
ಹೀಗೆ ಒಟ್ಟು 28 ಹುದ್ದೆಗಳು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ : ತಕ್ಷಣ ಅರ್ಜಿ ಸಲ್ಲಿಸಿ
ಶೈಕ್ಷಣಿಕ ಅರ್ಹತೆ :
ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆಯನ್ನು ಹುದ್ದೆಗಳ ಅನುಸಾರವಾಗಿ ನಿಗದಿಪಡಿಸಲಾಗಿದ್ದು ಶೈಕ್ಷಣಿಕ ಅರ್ಹತೆಯನ್ನು ನೋಡುವುದಾದರೆ,
- ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮಶನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು : ಸೀನಿಯರ್ ಪ್ರೋಗ್ರಾಮ್ ಜೂನಿಯರ್ ಪ್ರೋಗ್ರಾಮ್ ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗಳಿಗೆ
- ಅಭ್ಯರ್ಥಿಗಳು ಕಂಪ್ಯೂಟರ್ ಅಪ್ಲಿಕೇಶನ್ ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ನಲ್ಲಿ bsc ಪದವಿಯನ್ನು ಹೊಂದಿರಬೇಕಾಗುತ್ತದೆ : ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ.
- ಗಣಕಯಂತ್ರದ ಜ್ಞಾನವನ್ನು ಹಾಗೂ ಕಾನೂನು ಪದವಿಯನ್ನು ಹೊಂದಿರಬೇಕು : ಸಹಾಯಕರು ಹುದ್ದೆಗಳಿಗೆ
- ಪದವಿಯ ಜೊತೆಗೆ ಗಣಕಯಂತ್ರದ ಜ್ಞಾನವನ್ನು ಅಭ್ಯರ್ಥಿಗಳು ಪಡೆದಿರಬೇಕು : ಕಿರಿಯ ಸಹಾಯಕರು ಹುದ್ದೆಗಳಿಗೆ
- ಪಿಯುಸಿ ಅಥವಾ ತತ್ಸಮನ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ದರ್ಜೆಯ ಬೆರಳಚ್ಚು ದಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು : ಬೆರಳುಚ್ಚುಗಾರ ಹುದ್ದೆಗಳಿಗೆ.
ಹೀಗೆ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ಹೀಗೆ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ ಹೊಂದಿರಬೇಕೆಂದು ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಾನ ಪ್ರಕ್ರಿಯೆ :
ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಒಟ್ಟು 28 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳ ಆಗಿರಬೇಕು ಗರಿಷ್ಠ ವಯಸ್ಸನ್ನು ವರ್ಗಗಳ ಅನುಸಾರವಾಗಿ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
- 35 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ
- 38 ವರ್ಷ 2a 2b 3a 3b ಅಭ್ಯರ್ಥಿಗಳಿಗೆ
- 40ವರ್ಷ ಎಸ್ ಸಿ ಎಸ್ ಟಿ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ಗರಿಷ್ಟಮಿತಿಯನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಕರ್ನಾಟಕ ಸರ್ಕಾರವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
- ಸೀನಿಯರ್ ಪ್ರೋಗ್ರಾಮ್ ಹುದ್ದೆಗೆ 52,650-97,100
- ಜೂನಿಯರ್ ಪ್ರೋಗ್ರಾಮ್ ಹುದ್ದೆಗೆ 43100-83,900
- ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗೆ 37,900-70,850
- ಸಹಾಯಕರು ಹುದ್ದೆಗೆ 30,350-58,250
- ಕಂಪ್ಯೂಟರ್ ಆಪರೇಟರ್ ಹುದ್ದೆಗೆ 30,350-58,250
- ಬೆರಳಚ್ಚುಗಾರರು ಹುದ್ದೆಗೆ 21,400-42,000
- ಕಿರಿಯ ಸಹಾಯಕರು ಹುದ್ದೆಗೆ 21,400-42,000
ಹೀಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಕರ್ನಾಟಕ ಸರ್ಕಾರದ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು.
- 750 ರೂಪಾಯಿ ಸಾಮಾನ್ಯ ಅರ್ಹತೆ ಮತ್ತು 2a 2b 3a 3b ಅಭ್ಯರ್ಥಿಗಳಿಗೆ
- 500 SC-ST ಮತ್ತು ಪ್ರವರ್ಗ 1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ
- 250 ರೂಪಾಯಿ ವಿಕಲಚೇತನ ಅಭ್ಯರ್ಥಿಗಳಿಗೆ
ಈ ರೀತಿಯಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಆನ್ಲೈನ್ ಮುಖಾಂತರ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸಬೇಕು.
ಪ್ರಮುಖ ದಿನಾಂಕಗಳು :
- ಅರ್ಜಿಯನ್ನು ಸಲ್ಲಿಸಲು ಆರಂಭ ದಿನಾಂಕ : 24 ಮಾರ್ಚ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಏಪ್ರಿಲ್ 2024
ಹೀಗೆ ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ. ಕಿರಿಯ ಸಹಾಯಕ ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಕರ್ನಾಟಕ ವಿಧಾನ ಪರಿಷತ್ತಿನ ಸಚಿವರದಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು ಧನ್ಯವಾದಗಳು.
ಇತರೆ ವಿಷಯಗಳು :
- ಗ್ರಾಮ ಪಂಚಾಯಿತಿ ನೇರ ನೇಮಕಾತಿ : ಆಯ್ಕೆ ಆದವರಿಗೆ ಸಂಬಳ 63,000 ಸಿಗುತ್ತೆ
- ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ : ತಕ್ಷಣ ಅಪ್ಲೈ ಮಾಡಿ ಇಲ್ಲಿದೆ ಲಿಂಕ್
ಇಲಾಖೆ ಹೆಸರು ಏನು ..?
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ.
ವೇತನ ಶ್ರೇಣಿ ಹೇಗಿದೆ ..?
ವಿವಿಧ ಹುದ್ದೆಗಳಿಗೆ ಅನುಗುಣವಾಗಿದೆ .