ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಗೃಹಜೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುತ್ತಿದೆ ಅದೇ ರೀತಿ ಇದೀಗ ಕೇಂದ್ರ ಸರ್ಕಾರವು ಕೂಡ ಉಚಿತ ವಿದ್ಯುತ್ ಯೋಜನೆಯನ್ನು ಜಾರಿಗೆ ತಂದಿದ್ದೆ ಈ ಯೋಜನೆ ಮೂಲಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ಯೋಜನೆಯ ಫಲಾನುಭವಿಗಳು ಪಡೆಯಬಹುದಾಗಿದೆ.
ಕೇವಲ ಈ ಯೋಜನೆಯ ಮೂಲಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುವುದಲ್ಲದೆ ವಿದ್ಯುತ್ತನ್ನು ಕೂಡ ತಯಾರಿ ಮಾಡಿ ಅದರಿಂದ ಆದಾಯವನ್ನು ಕೂಡ ಗಳಿಸಬಹುದಾಗಿದೆ. ಹಾಗಾದರೆ ಕೇಂದ್ರ ಸರ್ಕಾರದ ಆ ಯೋಜನೆ ಯಾವುದು ಎಂದು ನೋಡುವುದಾದರೆ,
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ :
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿರುವಂತಹ ಸರ್ಕಾರವು ದೇಶದಲ್ಲಿ ವಾಸಿಸುವ ಜನರಿಗೆ ಉಚಿತ ವಿದ್ಯುತ್ ಒದಗಿಸುವ ಸಲುವಾಗಿ ಪ್ರತಿಯೊಂದು ಮನೆಯ ಮೇಲೆ ಸೋಲಾರ್ ವಿದ್ಯುತ್ ತಳವಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರತಿ ತಿಂಗಳು 300 ಯೂನಿಟ್ ವರೆಗೆ ಈ ಯೋಜನೆಯ ಅಡಿಯಲ್ಲಿ ಉಚಿತ ವಿಧಿ ಪಡೆದುಕೊಳ್ಳಬಹುದು ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ ಒಂದು ಸೋಲಾರ್ ಪ್ಯಾನೆಲ್ ಅನ್ನು ಅಳವಡಿಸಿಕೊಳ್ಳುವುದರ ಮೂಲಕ ಉಚಿತ ವಿದ್ಯುತ್ ಅನ್ನು ಕೇಂದ್ರ ಸರ್ಕಾರದಿಂದ ಪಡೆಯಬಹುದು. ಈ ಯೋಜನೆಯ ಅಡಿಯಲ್ಲಿ ಒಂದು ಕೋಟಿಗೂ ಅಧಿಕ ಮನೆಯ ಮೇಲ್ಚಾವಣಿಯ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಮಂದಿ ಇತ್ತು.
ಕೇಂದ್ರ ಸರ್ಕಾರ ಈ ಯೋಜನೆ 75 021 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಎರಡು ವ್ಯಾಟ್ ಸೋಲಾರ್ ಪ್ಯಾನೆಲ್ ಅಳವಡಿಸಿಕೊಂಡರೆ ಶೇಕಡ ಅರವತ್ತರಷ್ಟು ಸಬ್ಸಿಡಿಯನ್ನು ಹಾಗೂ ಒಂದು ಕಿಲೋ ವ್ಯಾಟ್ ಸೋಲಾರ್ ಪ್ಯಾನೆಲ್ ಗೆ 40 ರಷ್ಟು ಸಬ್ಸಿಡಿ ಯನ್ನು ಈ ಯೋಜನೆಯ ಮೂಲಕ ನೀಡಲಾಗುತ್ತದೆ. ಗರಿಷ್ಟ 78,000ಗಳ ವರೆಗೆ ಪ್ರತಿ ಕುಟುಂಬಕ್ಕೆ ಕೇಂದ್ರ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತದೆ.
ಇದನ್ನು ಓದಿ : ಕೇಂದ್ರ ಸರ್ಕಾರದಿಂದ 11,000 ಉಚಿತ : ಮೋದಿ ಯಾರಿಗೆ ಹಣ ನೀಡುತ್ತಿದ್ದಾರೆ ತಿಳಿದುಕೊಳ್ಳಿ ಹಾಗೆ ಪಡೆದುಕೊಳ್ಳಿ
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಗೆ ಅಗತ್ಯ ದಾಖಲೆಗಳು :
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದಿಷ್ಟು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ವಿಳಾಸ ಪುರಾವೆ
- ಮನೆ ಮೇಲ್ಚಾವಣಿಯ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸಲು 50 ಫೀಟ್ ಜಾಗ ಇರುವ ಬಗ್ಗೆ ಮಾಹಿತಿ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. https://pmsuryaghar.gov.in/ಸರಿಯಾದ ಮಾಹಿತಿಗಳನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಿ ಅಪ್ರೂವ್ ಆದ 30 ದಿನಗಳ ಒಳಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ಯೋಜನೆಯ ಸಬ್ಸಿಡಿಯ ಹಣ ವರ್ಗಾವಣೆಯಾಗುತ್ತದೆ.
ಒಟ್ಟಾರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ ಅಡಿಯಲ್ಲಿ ಜನತೆಯು ಕೇವಲ 300 ಜನವರಿ 15 ಸಾವಿರ ರೂಪಾಯಿಗಳವರೆಗೆ ಹಣವನ್ನು ಪಡೆಯಬಹುದಾಗಿದೆ.
ಹಾಗಾಗಿ ಪ್ರತಿಯೊಬ್ಬರಿಗೂ ಈ ಯೋಜನೆ ಬಗ್ಗೆ ಶೇರ್ ಮಾಡುವ ಮೂಲಕ ಅವರು ಕೂಡ ತಮ್ಮ ಮನೆಯ ಮೇಲ್ಚಾವಣಿಯ ಮೇಲೆ ಉಚಿತ ಸೋಲಾರ್ ವಿದ್ಯುತ್ತನ್ನು ಅಳವಡಿಸಿಕೊಳ್ಳಲಿ ಇದರಿಂದ ಅವರು ಉಚಿತ ವಿದ್ಯುತ್ ಅಲ್ಲದೆ ಆದಾಯವನ್ನು ಗಳಿಸಲಿ ಧನ್ಯವಾದಗಳು.