ಹಲೋ ಸ್ನೇಹಿತರೇ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ರೈತರಿಗೆ ವರದಾನವಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..
2023-24ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸಲು ನಿರ್ಧರಿಸಲಾಗಿದೆ.
ಕೃಷಿ ಭಾಗ್ಯ ಯೋಜನೆಯ ಉದ್ದೇಶ:
ಸಮರ್ಪಕವಾಗಿ ಮಳೆ ನೀರಿನ ಸಂಗ್ರಹಣೆ ಮಾಡುವುದು. ಶೇಖರಣೆಯಾದ ನೀರನ್ನು ಉಪಯುಕ್ತವಾಗಿ ಬಳಕೆ ಮಾಡಿ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯ ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿರುತ್ತದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ನಂತರ ಬಿಜೆಪಿ ಸರಕಾರ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮಹತ್ವಾಕಾಂಕ್ಷಿ ಯೋಜನೆಯ ಮರುಜಾರಿಗೆ ಮುಂದಾಗಿದ್ದಾರೆ. ಹಿಂದಿನ ಅವಧಿಯಲ್ಲಿ(2013-18) ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿತ್ತು.
ಹೀಗಾಗಿ ಈ ಸಾಲಿನಲ್ಲೂ 100 ಕೋಟಿ ರೂ ವೆಚ್ಚದಲ್ಲಿ ಕೋಲಾರ ಜಿಲ್ಲೆ ಸೇರಿದಂತೆ 24 ಜಿಲ್ಲೆಗಳ ವ್ಯಾಪ್ತಿಯ 106 ತಾಲೂಕುಗಳಲ್ಲಿ ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ. 106 ತಾಲೂಕುಗಳಲ್ಲಿ16,062 ಕೃಷಿ ಹೊಂಡ ನಿರ್ಮಾಣ ಗುರಿ ಹೊಂದಿದ್ದು, ಕ್ಷೇತ್ರ ಬದು ನಿರ್ಮಾಣ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ ಅಳವಡಿಕೆ.
ಪರೀಕ್ಷೆ ಇಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ನೇರ ನೇಮಕಾತಿ : PUC ಪಾಸಾಗಿದ್ದರೆ ಸಾಕು
ಕೃಷಿ ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ಸೆಟ್ ಪೂರೈಕೆ, ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀರಾವರಿ ಘಟಕ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಕೆ ಸೇರಿದಂತೆ ಹಲವು ಘಟಕಗಳಿಗೆ ಹಣಕಾಸು ನೆರವು ನೀಡಲು ನಿರ್ಧರಿಸಲಾಗಿದೆ.
ಯಾರು ಸಲ್ಲಿಸಬಹುದು ಅರ್ಜಿ?
ಕೃಷಿ ಭಾಗ್ಯ ಯೋಜನೆಯ ಸವಲತ್ತು ಪಡೆಯಲು ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆದರೆ ಕೃಷಿ ಭಾಗ್ಯ ಯೋಜನೆಯಡಿ ಸವಲತ್ತು ಪಡೆದಿರುವ ರೈತರು ಹಾಗೂ ನರೇಗಾ ಯೋಜನೆಯಡಿ ಸವಲತ್ತು ಪಡೆದಿರುವ ರೈತರನ್ನು ಹೊರತುಪಡಿಸಿ ಉಳಿದ ಎಲ್ಲಾ ರೈತ ಬಾಂಧವರು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಯ ಪೂರ್ಣ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು.
ಅರ್ಜಿಯ ಜತೆ ಎಫ್ಐಡಿ, ರೈತರ ಭಾವಚಿತ್ರ ಇರಬೇಕು. ಫ್ರೂಟ್ಸ್ ಐಡಿ ಇರದಿದ್ದರೆ, ಆಧಾರ್ ಪ್ರತಿ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ಬುಕ್ ಪ್ರತಿ, ರೈತರ ಭಾವಚಿತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಜ್ಯೇಷ್ಠತಾ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಏನಿದು ಕೃಷಿ ಭಾಗ್ಯ ಯೋಜನೆ?
ಒಣ ಭೂಮಿಯ ರೈತರು ಬೇಸಾಯಕ್ಕೆ ಮಳೆ ನೀರು ಸಂಗ್ರಹಿಸಲು ಅವಕಾಶ, ಕೃಷಿ ಹೊಂಡ ನಿರ್ಮಿಸಿ, ನೀರು ಇಂಗದಂತೆ ಪಾಲಿಥಿನ್ ಶೀಟ್ ಅಳವಡಿಕೆ, ನೀರು ಎತ್ತಲು ಡೀಸೆಲ್ ಪಂಪ್ಸೆಟ್ ಅಳವಡಿಸಿ, ತುಂತುರು ನೀರಾವರಿ ವ್ಯವಸ್ಥೆ, ಕೃಷಿ ಹೊಂಡದ ಸುತ್ತ ತಂತಿ ಬೇಲಿ ಅಳವಡಿಕೆಗೆ ಕೃಷಿ ಭಾಗ್ಯ ಯೋಜನೆಯಡಿ ಸರಕಾರ ನೆರವು ನೀಡಲಿದೆ.
ಇತರೆ ವಿಷಯಗಳು:
ಕೇಂದ್ರದಿಂದ ಏಪ್ರಿಲ್ 29ರ ರಂದು ಬರ ಪರಿಹಾರ ಬಿಡುಗಡೆ : ಎಷ್ಟು ಪರಿಹಾರ ರೈತರಿಗೆ ಸಿಗಲಿದೆ ?