ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಉದ್ಯೋಗಾವಕಾಶಕ್ಕಾಗಿ ಕಾಯುತ್ತಿರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಇದೀಗ ಹಲವು ಹುದ್ದೆಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದು ಇವುಗಳ ನೇಮಕಾತಿಗಾಗಿ ಕರ್ನಾಟಕ ಸರ್ಕಾರವು ಅರ್ಜಿಯನ್ನು ಆಹ್ವಾನ ಮಾಡಿದೆ.
ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಉದ್ಯೋಗವನ್ನು ಪಡೆದುಕೊಳ್ಳಬಹುದು. ಈಗಾಗಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆಯಾಗಿದ್ದು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸರಿಯಾಗಿ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡಿ ಅದಾದ ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ.
ಅದರಂತೆ ಇವತ್ತಿನ ಲೇಖನದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಯೋಮಾನ ಪ್ರಕ್ರಿಯೆ ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ಆಯ್ಕೆಯ ವಿಧಾನ ಶೈಕ್ಷಣಿಕ ಅರ್ಹತೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು :
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಒಟ್ಟು 2500 ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳ ಭರ್ತಿಗಾಗಿ ಸಾರಿಗೆ ಸಂಸ್ಥೆಯಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ವಿವರಗಳನ್ನು ನೋಡುವುದಾದರೆ,
- ಇಲಾಖೆಯ ಹೆಸರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಥವಾ ಬಿಎಂಟಿಸಿ
- ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ : 2500
- ಖಾಲಿ ಇರುವ ಹುದ್ದೆಗಳು : ನಿರ್ವಾಹಕ ಹುದ್ದೆ
- ವೇತನ ಶ್ರೇಣಿ : ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆ ಅಧಿಸೂಚನೆಯ ಪ್ರಕಾರ
- ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಮುಖಾಂತರ
- ಉದ್ಯೋಗ ಸ್ಥಳ : ಕರ್ನಾಟಕದ ಬೆಂಗಳೂರಿನಲ್ಲಿ.
ಒಟ್ಟಾರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊರಡಿಸಿರುವ ಅಧಿಕೃತ ಆದಿ ಸೂಚನೆಯ ಪ್ರಕಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಒಟ್ಟು 2500 ನಿರ್ವಾಹಕ ಹುದ್ದೆಗಳು ಖಾಲಿ ಇದ್ದು ಇದೀಗ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ :
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ಸಿ ಬಿ ಎಸ್ ಸಿ ಯ 10 ಪ್ಲಸ್ ಎರಡು ಅಥವಾ ಮೂರು ವರ್ಷದ ಡಿಪ್ಲೋಮೋ ಅಥವಾ ಅದಕ್ಕೆ ಸಮನಾದಂತಹ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕಾಗುತ್ತದೆ.
- ಅದರ ಜೊತೆಗೆ ಅಭ್ಯರ್ಥಿಗಳು ಮೋಟಾರ್ ವಾಹನ ನಿರ್ವಾಹಕ ಪರವಾನಗಿ ಹಾಗೂ ಬ್ಯಾಡ್ಜ್ ಅನ್ನು ಕೂಡ ಕಡ್ಡಾಯವಾಗಿ ಹೊಂದಿರಬೇಕೆಂದು ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
- ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಬಾಹ್ಯ ಕೋರ್ಸ್ ಗಳಾದ ಜೆ ಓ ಸಿ ಕೋರ್ಸ್ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
- ಹಾಗೂ ಈಗಾಗಲೇ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ಟರೆ ಶೈಕ್ಷಣಿಕ ಅರ್ಹತೆಯನ್ನು ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಯಲ್ಲಿ ಅಧಿಕೃತ ಅಧಿಸೂಚನೆ ಪ್ರಕಾರ ತಿಳಿಸಲಾಗಿದ್ದು ಈ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.
ವಯಸ್ಸಿನ ಮಿತಿ :
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದೆಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕೃತ ಅಧಿ ಸೂಚನೆಯಲ್ಲಿ ತಿಳಿಸಲಾಗಿದೆ. ಇದಷ್ಟೇ ಅಲ್ಲದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರವರ್ಗದ ಆಧಾರದ ಮೇಲೆ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
- ಮೂರು ವರ್ಷಗಳವರೆಗೆ : 2a 2b 3a 3b ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
- ಐದು ವರ್ಷಗಳವರೆಗೆ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ
- 10 ವರ್ಷಗಳವರೆಗೆ : ಮಾಜಿ ಸೈನಿಕ ಹಾಗೂ ಇಲಾಖೆ ಅಭ್ಯರ್ಥಿಗಳಿಗೆ
ಹೀಗೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಈ ಅರ್ಜಿ ಶುಲ್ಕವನ್ನು ಪ್ರವರ್ಗದ ಆಧಾರದ ಮೇಲೆ ಸರ್ಕಾರ ನಿಗದಿಪಡಿಸಿದೆ.
- 500 ರೂಪಾಯಿ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ
- 750 ರೂಪಾಯಿ : ಓಬಿಸಿ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ
ಹೀಗೆ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪ್ರವರ್ಗಗಳ ಆಧಾರದ ಮೇಲೆ ಪಾವತಿಸಬೇಕಾಗಿದ್ದು ಆನ್ಲೈನ್ ಮುಖಾಂತರವೇ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಪಾವತಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯುಪಿಐ ಪೇಮೆಂಟ್ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಸೂಚನೆಗಳನ್ನು ಸರಿಯಾಗಿ ಪಾಲಿಸಿ ಆನ್ಲೈನ್ ಮುಖಾಂತರ ಸಲ್ಲಿಸಬೇಕು.
- ಬೆಂಗಳೂರು ಮಹಾನಗರ ಸಾರಿಗೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಮೊದಲು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಓದಿ ಅರ್ಥೈಸಿಕೊಳ್ಳಬೇಕು.
- ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10 ಮಾರ್ಚ್ 2024 ರಿಂದ ಪ್ರಾರಂಭವಾಗಿ 10 ಏಪ್ರಿಲ್ 2024ರ ವರೆಗೆ ಕೊನೆಗೊಳ್ಳುತ್ತದೆ.
- ನಿಗದಿತ ದಿನಾಂಕದೊಳಗಾಗಿ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಬೇಕು ಅದಾದ ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ.
- ಅಜ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲ ಕವಿ ಅರ್ಜಿ ಸಲ್ಲಿಸಬೇಕಾಗುತ್ತದೆ.
- ಅಜ್ಜಿ ನಮೂನೆಯನ್ನು ಅಧಿಕೃತ ಪೇಜ್ ನಲ್ಲಿ ಕೇಳಲಾಗಿರುವ ರೀತಿಯಲ್ಲಿ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡಿರಬೇಕು.
- ಎಲ್ಲ ದಾಖಲಾತಿಗಳನ್ನು ಸರಿಪಡಿಸಿಕೊಂಡ ನಂತರ ಆದ ಹಾಕಲಾತಿಗಳನ್ನು ಭರ್ತಿ ಮಾಡಬೇಕಾಗುತ್ತದೆ.
- ಭರ್ತಿ ಮಾಡಿದ ನಂತರ ಎಲ್ಲ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಕೇವಲ ದಾಖಲಾತಿಗಳನ್ನು ಅಭ್ಯರ್ಥಿಗಳು ಹೊಂದಿರದೆ ಅದರ ಜೊತೆಗೆ ಅಭ್ಯರ್ಥಿಯ ಸಹಿ ಭಾವಚಿತ್ರ ಹೆಬ್ಬರಳಿನ ತಂಬ್ ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
- ಎಲ್ಲ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಪುನಹ ಪರಿಶೀಲನೆ ಮಾಡಿ ಏನಾದರೂ ತಪ್ಪುಗಳಿದ್ದರೆ ಅದನ್ನು ಸರಿಪಡಿಸಬೇಕು.
- ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸಿ 2024 ಏಪ್ರಿಲ್ 10ರ ಒಳಗಾಗಿ ಸಲ್ಲಿಸಬೇಕಾಗುತ್ತದೆ ಅದಾದ ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಯು ಪರೀಕ್ಷೆಯ ಸಮಯದಲ್ಲಿ ಅರ್ಜಿಯ ಪ್ರತಿಯು ಕೂಡ ಸಹಾಯವಾಗುತ್ತದೆ ಹಾಗಾಗಿ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿದ ನಂತರ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಹೀಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಮಾಹಿತಿಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಒಳ್ಳೆಯದು.
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 10 ಮಾರ್ಚ್ 2024
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 10 ಏಪ್ರಿಲ್ 20 24
ಹೀಗೆ ನೀವೇನಾದರೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ತಮ್ಮ ಅಧ್ಯಯನವನ್ನು ಈಗಿನಿಂದಲೇ ನಡೆಸುವುದು ಒಳ್ಳೆಯದು ಏಕೆಂದರೆ ಹೆಚ್ಚಿನ ಅಂಕಗಳನ್ನು ಪರೀಕ್ಷೆಯ ಸಮಯದಲ್ಲಿ ಪಡೆದುಕೊಂಡು ಹುದ್ದೆಗಳನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ. ಇಲ್ಲದಿದ್ದರೆ ನೀವು ಸಲ್ಲಿಸಿದ ಅತ್ಯಮೂಲ್ಯ ಅರ್ಜಿ ನಮೂನೆಗೆ ಯಾವುದೇ ರೀತಿಯ ಮೂಲ ಇಲ್ಲದಂತಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಉತ್ತಮ ಅಂಕಗಳನ್ನು ಪಡೆದುಕೊಂಡು ಉದ್ಯೋಗವನ್ನು ಪಡೆಯಬಹುದಾಗಿದೆ.
ಆಯ್ಕೆಯ ವಿಧಾನ :
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಯನ್ನು ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ :
ಬೆಂಗಳೂರು ಮಹಾನಗರ ಸಾರಿಗೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 18660 ರೂಪಾಯಿಗಳಿಂದ 25300 ರೂಪಾಯಿಗಳವರೆಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ಹುದ್ದೆಗೆ ಸಂಬಂಧಿಸಿದಂತೆ ಪ್ರಮುಖ ಲಿಂಕ :
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳನ್ನು ಈ ಲೇಖನದಲ್ಲಿ ನೋಡಬಹುದಾಗಿದೆ.cetonline.karnataka.gov.in ಈ ವೆಬ್ ಸೈಟಿಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
PDF ಲಿಂಕ್ | ಇಲ್ಲಿದೆ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | https://cetonline.karnataka.gov.in/kea/kbknrk2023 |
ಒಟ್ಟಾರೆ ಕರ್ನಾಟಕ ಸರ್ಕಾರವು ವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಅದರಂತೆ ಇವತ್ತಿನ ಲೇಖನದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದ್ದು ಇದೀಗ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗಗಳಿಗೆ ಆಯ್ಕೆಯಾಗಬಹುದಾಗಿದೆ.
ಹಾಗಾಗಿ ನಿಮಗೆ ತಿಳಿದಿರುವ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದರೆ ಅವರಿಗೆ ಇದು ಹೆಚ್ಚು ಉಪಯೋಗವಾಗಲಿದೆ ಧನ್ಯವಾದಗಳು.
ಉದ್ಯೋಗ ಸ್ಥಳ ಯಾವುದು ..?
ಕರ್ನಾಟಕ ರಾಜ್ಯ .
ಇಲಾಖೆ ಯಾವುದು ಕರ್ನಾಟ ರಾಜ್ಯ ಸರ್ಕಾರದಲ್ಲಿ ..?
ಸಾರಿಗೆ ಇಲಾಖೆ.