ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳೆರಡು ದೇಶದ ಜನತೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಂತೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದ್ದು ಈ ರೇಷನ್ ಕಾರ್ಡ್ ಕೇವಲ ಒಂದು ಕಾರ್ಡ್ ಆಗಿರದೆ ಅಗತ್ಯ ದಾಖಲೆಯಾಗಿ ಗುರುತಿನ ಚೀಟಿಯಾಗಿ ಹಾಗೂ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ.
ಪಡಿತರ ಚೀಟಿಯು ಬಡವರ್ಗದ ಜನರ ಜೀವನದಲ್ಲಿ ಹೆಚ್ಚು ಮಹತ್ವದ್ದಾಗಿದ್ದು ರೇಷನ್ ಕಾರ್ಡ್ ಇಲ್ಲದೆ ಹೋದರೆ ಬಡವರ್ಗದ ಜನರು ದಿನ ನಿತ್ಯದ ಬಳಸುವ ಆಹಾರ ಧಾನ್ಯಗಳನ್ನು ಮಾರುಕಟ್ಟೆ ಬೆಲೆಯಲ್ಲಿ ಇದು ಬಾರಿ ಬೆಲೆಗೆ ಖರೀದಿಸಬೇಕಾಗುತ್ತದೆ. ಆದರೆ ಈ ಬೆಲೆಗೆ ಖರೀದಿ ಮಾಡಲು ಆಗದೆ ಇರುವಂತಹ ಕುಟುಂಬಗಳಿಗೆ ರೇಷನ್ ಕಾರ್ಡ್ ಉದಯಿಸುವುದರ ಮೂಲಕ ಸರ್ಕಾರ ದಿನ ನಿತ್ಯದ ಬಳಕೆಯಾಗುವ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿ ಮಾಡಲು ಅವಕಾಶ ಕಲ್ಪಿಸುತ್ತಿದೆ ಎಂದು ಹೇಳಬಹುದು.
ಸಚಿವರಿಂದ ಮಾಹಿತಿ :
ಲೋಕಸಭಾ ಚುನಾವಣೆ ದೇಶದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೊಸ ರೇಷನ್ ಕಾರ್ಡ್ ಅನ್ನು ನೀಡುವುದಾಗಲಿ ಅಥವಾ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳನ್ನು ತಿದ್ದುಪಡಿ ಮಾಡುವುದಕ್ಕಾಗಲಿ ಚುನಾವಣಾ ಕಾನೂನಿನ ಉಲ್ಲಂಘನೆ ಮಾಡಿದಂತೆ ಆಗುತ್ತದೆ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಯಾವುದೇ ರೀತಿಯ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಕ್ರಮಗಳನ್ನು ಕೈಗೊಂಡಿರುವುದಿಲ್ಲ.
ಆದರೆ ಮುಂದಿನ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಮಾಡಿಕೊಡಲು ಸರಳ ಮತ್ತು ಸುಲಭವಾಗಿ ಅವಕಾಶವನ್ನು ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮಾಡಿಕೊಡಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವರು ತಿಳಿಸಿದ್ದಾರೆ.
ಇದನ್ನು ಓದಿ : ಆಧಾರ್ ಕಾರ್ಡ್ ವಿಚಾರದಲ್ಲಿ ಈ ರೀತಿ ಮಾಡಿದರೆ ದಂಡ ಮತ್ತು ಜೈಲು ಸೇರುವುದು ಖಚಿತ : ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ನಿಯಮ
ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ :
ಸಾಕಷ್ಟು ಬಾರಿ ಹೊಸ ರೇಷನ್ ಕಾರ್ಡ್ ಮತ್ತು ಅದರ ತಿದ್ದುಪಡಿ ಮಾಡಲು ಅವಕಾಶವನ್ನು ಕೊಡಲಾಗಿತ್ತು ಆದರೆ ಇದೀಗ ಮತ್ತೆ ಯಾವಾಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುತ್ತದೆ ಎಂದು ರಾಜ್ಯದ ಜನತೆಯು ಕಾತುರದಿಂದ ಕಾಯುತ್ತಿದ್ದಾರೆ ಆದರೆ ಈ ವಿಷಯದ ಬಗ್ಗೆ ಸರ್ಕಾರ ಮಾತ್ರ ಅಧಿಕೃತವಾಗಿ ಎಲ್ಲೂ ಕೂಡ ಮಾಹಿತಿಯನ್ನು ಹಂಚಿಕೊಂಡಿರುವುದಿಲ್ಲ.
ಸದ್ಯ ರೇಷನ್ ಕಾರ್ಡ್ ತಿದ್ದುಪಡಿ ಆಗಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವುದಾಗಲಿ ರಾಜ್ಯದಲ್ಲಿ ಯಾವುದೇ ರೀತಿಯ ಮಹೂರ್ತವನ್ನು ಫಿಕ್ಸ್ ಮಾಡಿರುವುದಿಲ್ಲ ಆದರೆ ಮುಂದಿನ ದಿನಗಳಲ್ಲಿ ಅಂದರೆ ಲೋಕಸಭಾ ಚುನಾವಣೆ ಮುಗಿದ ನಂತರ ಮರುದಿನದಿಂದ ಜೂನ್ ತಿಂಗಳ ಮೊದಲ ವಾರದಲ್ಲಿ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಹಾಗಾಗಿ ಅರ್ಜಿದಾರರು ಅರ್ಜಿಯನ್ನು ಸಲ್ಲಿಕೆ ಮಾಡುವವರೆಗೂ ಕಾಯಬೇಕಾಗಿರುತ್ತದೆ ಅಲ್ಲದೆ ಎಲ್ಲ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಆಗ ಮಾತ್ರ ಸುಲಭವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ.
- ವಾಸ್ತವ ಪುರಾವೆಗಳು ಅಂದರೆ ವೋಟರ್ ಐಡಿ ಆಧಾರ್ ಕಾರ್ಡ್
- ವಯಸ್ಸಿನ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಸೈಜ್ ಫೋಟೋ
- ವಾರ್ಡ್ ಕೌನ್ಸಿಲರ್ ನೀಡಿದ ಘೋಷಣೆ ಪತ್ರ
ಹೀಗೆ ಈ ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ತಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ಅಂದರೆ ಸರ್ಕಾರದ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕು ಖಾಸಗಿ ಸೈಬರ್ ಸೆಂಟರ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಿದರೆ ಅಂತಹ ಅರ್ಜಿಗಳು ತಿರಸ್ಕಾರವಾಗಬಹುದು.
ಒಟ್ಟಾರೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಗಾಗ ಹೊಸ ಹೊಸ ಮಾಹಿತಿಗಳನ್ನು ರಾಜ್ಯದ ಜನತೆಗೆ ತಿಳಿಸುತ್ತಿದ್ದು ಇದೀಗ ಜೂನ್ ತಿಂಗಳ ಮೊದಲ ವಾರದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು ಎಂಬ ಮಾಹಿತಿಗಳು ಕೆಲವೊಂದು ಮೂಲಗಳಿಂದ ತಿಳಿದುಬರುತ್ತದೆ.
ಆದರೆ ಸರ್ಕಾರದಿಂದ ಯಾವುದೇ ರೀತಿ ಅಧಿಕೃತ ಘೋಷಣೆ ಹೊರಡಿಸಿರುವುದಿಲ್ಲ ಹಾಗಾಗಿ ಸರ್ಕಾರ ಯಾವಾಗ ಅಧಿಕೃತವಾಗಿ ಘೋಷಣೆ ಹೊರಡಿಸುತ್ತದೆ ಅಲ್ಲಿಯವರೆಗೂ ರಾಜ್ಯದ ಜನತೆ ಕಾತುರದಿಂದ ಕಾಯಬೇಕು. ರೇಷನ್ ಕಾರ್ಡ್ ಗೆ ಸಂಬಂಧಿಸಿದಂತಹ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಸ್ನೇಹಿತರು ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.