ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಒಂದು ಸಿಹಿ ಸುದ್ದಿಯನ್ನು ತಿಳಿಸಿದೆ ಅದು ಏನೆಂದರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಅಂದರೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಮಹತ್ವದ ಹುದ್ದೆಯಾಗಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂದರೆ ಪಿಡಿಒ ಹುದ್ದೆಗಳಿಗೆ ಹೊಸ ನೇಮಕಾತಿಗಾಗಿ ಕೆಪಿಎಸ್ಸಿ ಅಂದರೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಕೃತ ಅಧಿಸೂಚನೆ :
ಕರ್ನಾಟಕ ಲೋಕಸೇವಾ ಆಯೋಗ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಮಹತ್ವದ ಹುದ್ದೆಯಾಗಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಇದೀಗ ಹೊಸ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ ವೇತನ ಶ್ರೇಣಿ ಅರ್ಜಿ ಶುಲ್ಕದ ವಿವರ ವಯೋಮಾನ ಪ್ರಕ್ರಿಯೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹುದ್ದೆಗಳ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸಲು ಸಂಬಂಧಿಸಿದಂತೆ ಹುದ್ದೆಗಳಿಗೆ ಸಾಕಷ್ಟು ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ನೇಮಕಾತಿ ಪ್ರಾಧಿಕಾರ | ಕರ್ನಾಟಕ ಲೋಕಸೇವಾ ಆಯೋಗ |
ಇಲಾಖೆಯ ಹೆಸರು | ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
ಖಾಲಿ ಇರುವ ಹುದ್ದೆಯ ಹೆಸರು | ಪಂಚಾಯಿತಿ ಅಭಿವೃದ್ಧಿ ಅಧಿಕಾರಿ [ PDO] |
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ | 247 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
ಉದ್ಯೋಗದ ಸ್ಥಳ | ಕರ್ನಾಟಕದಾದ್ಯಂತ |
ಒಟ್ಟಾರೆ ರಾಜ್ಯ ಸರ್ಕಾರವು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಖಾಲಿ ಇರುವ 150 ಹೂಡಿಕೆ ಮೂಲ ವೃಂದದ ಹಾಗೂ 97 ಹೈದರಾಬಾದ್ ಕರ್ನಾಟಕ ವೃತ್ತದ ಹುದ್ದೆಗಳು ಸೇರಿ ಒಟ್ಟು 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳು ಖಾಲಿ ಇದ್ದು ಇದೀಗ ಪ್ರತ್ಯೇಕವಾಗಿ ಅಧಿಸೂಚನೆಯನ್ನು ಕರ್ನಾಟಕ ಲೋಕಸೇವಾ ಆಯೋಗವು ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮನ ಪ್ರಕ್ರಿಯೆ :
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.
- ಸಾಮಾನ್ಯ ಅಭ್ಯರ್ಥಿಗಳಿಗೆ: 35 ವರ್ಷ
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷ
- ಎಸ್ ಸಿ ಎಸ್ ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ: 40 ವರ್ಷ
ಹೀಗೆ ವಯಸ್ಸಿನ ಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ಗರಿಷ್ಠ ಮಿತಿಯನ್ನು ನಿಗದಿಪಡಿಸಲಾಗಿದ್ದು ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ ಶ್ರೇಣಿ :
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ ಹುದ್ದೆಯಾಗಿದ್ದು ಗ್ರಾಮಾಡಳಿತದ ಬಹುಮುಖ್ಯಗೊಂಡಿದ್ದಾರೆ ಎಂದು ಹೇಳಬಹುದು.
ಅದರಂತೆ ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಸರ್ಕಾರವು ಪಿಂಚಣಿ ವೇತನ ಸಹಿತ ವಿವಿಧ ಸೌಲಭ್ಯಗಳನ್ನು ಕೂಡ ನಿಗದಿಪಡಿಸಿದೆ. ಅದರಂತೆ ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ವಾರ್ಷಿಕ ವೇತನ
37900 – 70850ಗಳವರೆಗೆ ಮಾಸಿಕ ವೇತನ ಶ್ರೇಣಿ ನಿಗದಿಪಡಿಸಲಾಗಿದ್ದು ಇದರ ಜೊತೆಗೆ ಆಕರ್ಷಕ ಪಿಂಚಣಿ ಸೌಲಭ್ಯವು ಕೂಡ ಈ ಹುದ್ದೆಗಳಿಗೆ ಸರ್ಕಾರ ನೀಡುತ್ತದೆ.
ಇದನ್ನು ಓದಿ : ಕರ್ನಾಟಕ ವಿಧಾನ ಪರಿಷತ್ ಸಚಿವಾಲದಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ , ಇಲ್ಲಿದೆ ಲಿಂಕ್
ಅರ್ಜಿ ಶುಲ್ಕದ ವಿವರ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು ಈ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600
- ಇತರ ಹಿಂದುಳಿದ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ರೂ.300.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಐವತ್ತು ರೂಪಾಯಿ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.
ಹೀಗೆ ಅರ್ಜಿ ಶುಲ್ಕವನ್ನು ಕೂಡ ನಿಗದಿಪಡಿಸಲಾಗಿದ್ದು ಆನ್ಲೈನ್ ಮುಖಾಂತರ ವ್ಯಯ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸಬೇಕು ಅಂದರೆ ನೆಟ್ ಬ್ಯಾಂಕಿಂಗ್ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಯುಪಿಐ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸಬೇಕಾಗುತ್ತದೆ.
ಆಯ್ಕೆಯ ವಿಧಾನ :
ಕಡ್ಡಾಯವಾಗಿ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಸುವ ಎಲ್ಲಾ ಹುದ್ದೆಗಳಿಗೂ ಕೂಡ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯ ಮೂಲಕ ನಡೆಸಲಾಗುತ್ತದೆ ಅದರಂತೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕವೇ ಅಭ್ಯರ್ಥಿಗಳನ್ನು ಕೂಡ ಆಯ್ಕೆ ಮಾಡಲಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಅಭ್ಯರ್ಥಿಗಳು ಮತ್ತು ಮೀಸಲಾತಿ ನಿಯಮಗಳ ಅನುಸಾರವಾಗಿ ಹಾಗೂ ಅಭ್ಯರ್ಥಿಗಳು ನೀಡಿರುವ ಆದ್ಯತೆ ಪರಿಗಣಿಸಿ ಪಿಡಿಒ ಹುದ್ದೆಗಳಿಗೆ ಮೊದಲು ಆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿ :
ಕರ್ನಾಟಕದಲ್ಲಿ ಖಾಲಿ ಇರುವ ಪಿಡಿಓ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಅಂದರೆ ರಾಜ್ಯದ ಎಲ್ಲ ಜಿಲ್ಲಾ ಅಥವಾ ತಾಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಒಟ್ಟು 400 ಅಂಕಗಳಿಗೆ ಅಂದರೆ ತಲಾ 200 ಅಂಕಗಳ ಎರಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಭ್ಯರ್ಥಿಗಳಿಗೆ ನಡೆಸಲಾಗುತ್ತದೆ.
ಎರಡು ಗಂಟೆಗಳವರೆಗೆ ಒಂದೊಂದು ಪರೀಕ್ಷಾ ಅವಧಿಯು ನಿಗದಿಪಡಿಸಲಾಗಿದ್ದು ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳು ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇರುತ್ತವೆ.
- ಒಟ್ಟು 200 ಅಂಕಗಳಿಗೆ ಒಂದು ಪ್ರಶ್ನೆ ಪತ್ರಿಕೆ ಇದ್ದು ಈ ಪ್ರಶ್ನೆ ಪತ್ರಿಕೆಯಲ್ಲಿ ಸಾಮಾನ್ಯ ಕನ್ನಡ ಸಾಮಾನ್ಯ ಜ್ಞಾನ ಸಾಮಾನ್ಯ ಇಂಗ್ಲಿಷ್ ಕುರಿತ 100 ಅಂಕಗಳು ನಿಗದಿಪಡಿಸಲಾಗಿದೆ.
- ಪ್ರಶ್ನೆ ಪತ್ರಿಕೆ ಎರಡರಲ್ಲಿ 100 ಪ್ರಶ್ನೆಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಕ್ಕೆ ಸಂಬಂಧಿಸಿದಂತೆ ಇರುತ್ತವೆ.
ಈ ಎರಡು ಪ್ರಶ್ನೆ ಪತ್ರಿಕೆಗಳು ಸೇರಿ ಒಟ್ಟು 400 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಭ್ಯರ್ಥಿಗಳಿಗೆ ನಟಿಸಲಾಗುತ್ತದೆ.
ಪ್ರಮುಖ ದಿನಾಂಕಗಳು :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪೀಡಿಗೋ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :15-04-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-05-2024
ಹೀಗೆ ನಿಗದಿತ ದಿನಾಂಕದೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಹೆಚ್ಚಿನ ಅಂಕಗಳನ್ನು ಪಡೆದು ಉದ್ಯೋಗವನ್ನು ಪಡೆಯಬಹುದಾಗಿದೆ.
ಒಟ್ಟರೆ ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಖಾಲಿ ಇರುವಂತಹ ಪಿಡಿಓ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ನೇಮಕಾತಿಯು ಕರ್ನಾಟಕ ಲೇಖ ಸೇವಾ ಆಯೋಗದ ಒಟ್ಟರೆ ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಖಾಲಿ ಇರುವಂತಹ ಪಿಡಿಓ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ನೇಮಕಾತಿಯು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾಗುತ್ತಿದ್ದು ಶೀಘ್ರದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸುತ್ತದೆ.
ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ ಇದೊಂದು ಸುವರ್ಣ ಅವಕಾಶವೆಂದು ತಿಳಿಸಿ ಧನ್ಯವಾದಗಳು.
ಅರ್ಜಿ ಸಲ್ಲಿಸುವ ಲಿಂಕ್ : https://kpsc.kar.nic.in/
PDF ಲಿಂಕ್ : ಡೌನ್ಲೋಡ್ ಮಾಡಿ
ಇತರೆ ವಿಷಯಗಳು :
- BMTC Job : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ :ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ
- SSLC ಮತ್ತು PUC ಪಾಸಾದವರಿಗೆ ಪಶುಪಾಲನ ನಿಗಮದಲ್ಲಿ 1,125 ಹುದ್ದೆಗಳ ಬೃಹತ್ ನೇಮಕಾತಿ ಅರ್ಜಿ ಸಲ್ಲಿಸಿ.!
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು ..?
15-05-2024 ರ ಒಳಗೆ ಅರ್ಜಿ ಸಲ್ಲಿಸಿ.
ಆಯ್ಕೆ ವಿಧಾನ ಯಾವ ರೀತಿ ಇದೆ ..?
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ .