Headlines

ಕಾರ್ಮಿಕ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ : ತಕ್ಷಣ ಅಪ್ಲೈ ಮಾಡಿ, ಇಲ್ಲಿದೆ ಲಿಂಕ್

Application Invitation for Labor Card Scholarship

ನಮಸ್ಕಾರ ಸ್ನೇಹಿತರೆ ಸರ್ಕಾರದ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳಿಗೂ ಶೈಕ್ಷಣಿಕ ಅರ್ಹತಾ ಸ್ಥಾನಮಾನ ನೀಡಬೇಕೆಂದು ಅರ್ಹ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಇದೀಗ ಕಾರ್ಮಿಕ ಇಲಾಖೆಯು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

Application Invitation for Labor Card Scholarship
Application Invitation for Labor Card Scholarship

ಹಾಗಾದರೆ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಕಾರ್ಮಿಕ ಮಕ್ಕಳಿಗೆ ಎಷ್ಟು ವಿದ್ಯಾರ್ಥಿ ವೇತನವನ್ನು ನೀಡುತ್ತದೆ ಹಾಗೂ ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.

ಕಾರ್ಮಿಕರ ಕಾರ್ಡ್ ಹೊಂದಿರುವ ಮಕ್ಕಳಿಗೆ ಸ್ಕಾಲರ್ಶಿಪ್ :

ಕಾರ್ಮಿಕರ ಮಕ್ಕಳು ಶೈಕ್ಷಣಿಕ ಅರ್ಹದ ಸ್ಥಾನಮಾನ ಹಾಗೂ ಉನ್ನತ ಶಿಕ್ಷಣವನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಸರ್ಕಾರದ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ನಿರ್ಧರಿಸಿದ್ದು ಆಹ್ವಾನ ಮಾಡಲಾಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾದರೆ ಏನೆಲ್ಲಾ ಅರ್ಹತೆಗಳು ಹೊಂದಿರಬೇಕೆಂದು ಹಾಗೂ ಎಷ್ಟು ಮತದ ವಿದ್ಯಾರ್ಥಿ ಮೊತ್ತ ಸಿಗಲಿದೆ ಎಂಬುದನ್ನು ನೋಡುವುದಾದರೆ.

ಇದನ್ನು ಓದಿ : ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ

ವಿದ್ಯಾರ್ಥಿ ವೇತನಕ್ಕೆ ಇರುವ ಅರ್ಹತೆಗಳು :

ವಿದ್ಯಾರ್ಥಿ ವೇತನವನ್ನು ಕರ್ನಾಟಕದಲ್ಲಿ ವಾಸ್ತವ್ಯ ಹೊಂದಿರುವ ಕಟ್ಟಡ ನಿರ್ಮಾಣ ಮತ್ತು ಇತರ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತದೆ.

ಕಾರ್ಮಿಕ ಕಾರ್ಡ್ ಅಂದರೆ ಲೇಬರ್ ಕಾರ್ಡ್ ಅನ್ನು ಹೊಂದಿರುವುದು ವಿದ್ಯಾರ್ಥಿ ವೇತನವನ್ನು ಪಡೆಯಲು ಕಡ್ಡಾಯವಾಗಿದೆ ಅಂದರೆ ವಿದ್ಯಾಭ್ಯಾಸವನ್ನು ಕಾರ್ಮಿಕರ ಮಕ್ಕಳು ಶೈಕ್ಷಣಿಕ ವರ್ಷದಲ್ಲಿ ಪಡೆಯುತ್ತಿದ್ದರೆ ಮಾತ್ರವೇ ಈ ಒಂದು ಯೋಜನೆಗೆ ಅರ್ಹರಾಗಿರುತ್ತಾರೆ ಎಂದರ್ಥ.

ವಿದ್ಯಾರ್ಥಿ ವೇತನದ ಮೊತ್ತ :

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ತರಗತಿಗಳಿಗೆ ಅನುಗುಣವಾಗಿ ನೀಡಲಾಗುತ್ತದೆ ಅದರಂತೆ ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ನೋಡುವುದಾದರೆ,

 1. ಎಂಟರಿಂದ 10ನೇ ತರಗತಿಯ ಮಕ್ಕಳಿಗೆ 3000 ಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
 2. ಪಿಯುಸಿ ಡಿಪ್ಲೋಮಾ ಹಾಗೂ ಟಿಸಿಎಚ್ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ 4000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
 3. ಪದವಿ ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಲೇಬರ್ ಕಾರ್ಡ್ ನ ಮೂಲಕ 5,000 ವಿದ್ಯಾರ್ಥಿ ವೇತನ ಸಿಗಲಿದೆ.
 4. ಇಂಜಿನಿಯರಿಂಗ್ ಹಾಗು ವೈದ್ಯಕೀಯ ಕೋರ್ಸ್ ಮಾಡುತ್ತಿರುವಂತಹ ಕಾರ್ಮಿಕರ ಮಕ್ಕಳಿಗೆ 10 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.
 5. ಕಾರ್ಮಿಕ ಕಾರ್ಡಿನ ಮೂಲಕ ಯಾರಾದರೂ ಕಾರ್ಮಿಕರ ಮಕ್ಕಳಲ್ಲಿ ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದರೆ 6,000 ವಿದ್ಯಾರ್ಥಿ ವೇತನವನ್ನು ಅಂಥವರಿಗೆ ನೀಡಲಾಗುತ್ತದೆ.
  ಹೀಗೆ ತರಗತಿಗಳಿಗೆ ಅನುಗುಣವಾಗಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಕಾರ್ಮಿಕ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತದೆ.

ವಿದ್ಯಾರ್ಥಿ ವೇತನಕ್ಕೆ ಬೇಕಾಗುವ ದಾಖಲೆಗಳು :

ಕಾರ್ಮಿಕರ ಮಕ್ಕಳು ಕಾರ್ಮಿಕ ಇಲಾಖೆ ಕಲ್ಯಾಣ ಮಂಡಳಿಯಿಂದ ನೀಡಲಾಗುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ

 1. ಅಭ್ಯರ್ಥಿಗಳ ಪೋಷಕರಿಗೆ ಲೇಬರ್ ಕಾರ್ಡ್ ಅನ್ನು ಹೊಂದಿರಬೇಕು.
 2. ಆಧಾರ್ ಕಾರ್ಡ್
 3. ಬ್ಯಾಂಕ್ ಪಾಸ್ ಬುಕ್
 4. ಮೊಬೈಲ್ ನಂಬರ್
 5. ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್
  ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ :

ಕಾರ್ಮಿಕರು ಏನಾದರೂ ಲೇಬರ್ ಕಾರ್ಡನ್ನು ಹೊಂದಿದ್ದರೆ ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಕಾರ್ಮಿಕ ಕಾರ್ಡ್ ನ ಮೂಲಕ ಪಡೆಯಬಹುದಾಗಿದೆ. ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ್ಕೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಆನ್ಲೈನ್ ಮೂಲಕ ಅರ್ಜುನ್ ಸಲ್ಲಿಸಲು ಎಸ್ ಎಸ್ ಬಿ ಪೋರ್ಟಲ್ನ ಮೂಲಕ ಅವಕಾಶ ಕಲ್ಪಿಸಲಾಗಿದ್ದು ಆಫ್ ಲೈನ್ ಮೂಲಕ ಅರ್ಜಿಯನ್ನು ಕಾರ್ಮಿಕ ಇಲಾಖೆಯ ಭೇಟಿ ನೀಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಒಂದು ವೇಳೆ ಎಸ್ಎಸ್ಪಿ ಪೋರ್ಟಲ್ನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗದೆ ಇದ್ದರೆ ಕಾರ್ಮಿಕ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. https://klwbapps.karnataka.gov.in ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಹೀಗೆ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಕಾರ್ಮಿಕರ ಮಕ್ಕಳು ಕೂಡ ಉನ್ನತ ಶಿಕ್ಷಣವನ್ನು ಹಾಗೂ ಶೈಕ್ಷಣಿಕ ಅರ್ಹತ ಸ್ಥಾನಮಾನವನ್ನು ಪಡೆಯಬೇಕೆನ್ನುವ ಉದ್ದೇಶದಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆದು ಕಾರ್ಮಿಕರ ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನು ಉನ್ನತ ಮಟ್ಟದಲ್ಲಿ ಸಾಧಿಸಬಹುದಾಗಿದೆ ಹಾಗಾಗಿ ಕರ್ನಾಟಕ ಸರ್ಕಾರದ ಈ ವಿದ್ಯಾರ್ಥಿ ವೇತನದ ಬಗ್ಗೆ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಯಾವ ರಾಜ್ಯದಲ್ಲಿ ಕಾರ್ಮಿಕ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ ..?

ಕರ್ನಾಟಕ ರಾಜ್ಯದಲ್ಲಿ ಅರ್ಜಿ ಅಹ್ವಾನ.

ಒಂದು ಕುಟುಂಬದಲ್ಲಿ ಎಷ್ಟು ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತೆ ..?

ಇಬ್ಬರು ಮಕ್ಕಳಿಗೆ ಸಿಗುತ್ತೆ.

Leave a Reply

Your email address will not be published. Required fields are marked *