ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪರೀಕ್ಷೆ ಇಲ್ಲದೆ ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಗಳನ್ನು ಪಡೆದುಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೇವಲ ಜಸ್ಟ್ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ. ಅದರಂತೆ ಯಾವ ಯಾವ ಹುದ್ದೆಗಳು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇವೆ ಶೈಕ್ಷಣಿಕ ಅರ್ಹತೆಯನ್ನು ವಯೋಮಿತಿ ಎಷ್ಟು ಹುದ್ದೆಗಳು ಖಾಲಿ ಇವೆ ಅರ್ಜಿ ಶುಲ್ಕ ವೇತನ ಶ್ರೇಣಿ ಸೇರಿದಂತೆ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಿಳಿದುಕೊಳ್ಳಬಹುದು.
ಗ್ರಾಮ ಪಂಚಾಯಿತಿನಲ್ಲಿ ನೇರ ನೇಮಕಾತಿ :
ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಹುದ್ದೆಗಳಿಗೆ ಸಂಬಂಧಿಸಿದಂತೆ ವಿವರವನ್ನು ನೋಡುವುದಾದರೆ
- ಒಟ್ಟು ಖಾಲಿ ಇರುವ :33
- ಖಾಲಿ ಇರುವ ಹುದ್ದೆಯ ಹೆಸರು : ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮುಖಾಂತರ
- ವಿದ್ಯಾರ್ಹತೆ : ಪಿಯುಸಿ
- ನೇಮಕಾತಿ ವಿಧಾನ : ನೇರ ನೇಮಕಾತಿ
ಒಟ್ಟಾರೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ.
ಶೈಕ್ಷಣಿಕ ಅರ್ಹತೆ :
ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಯ ಬಗ್ಗೆ ಅಭ್ಯರ್ಥಿಗಳು ತಿಳಿದುಕೊಂಡಿರಬೇಕು.
ಗ್ರಾಮ ಪಂಚಾಯತ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು ಅದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರವನ್ನು ಪಡೆದಿರಬೇಕಾಗುತ್ತದೆ. ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ :
ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ ವಯೋಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ಸಡಿಲಿಕೆ ಮಾಡಲಾಗಿದೆ.
- 35 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ
- 38 ವರ್ಷ 2a 2b 3a 3b ವಿದ್ಯಾರ್ಥಿಗಳಿಗೆ
- 40 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ
ವೇತನ ಶ್ರೇಣಿ :
ಗ್ರಂಥಾಲಯ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15196 ರೂಪಾಯಿಗಳಂತೆ ವೇತನವನ್ನು ನೀಡಲಾಗುತ್ತದೆ.
ಇದನ್ನು ಓದಿ : ಮಹಿಳೆ ಮತ್ತು ಮಕ್ಕಳಿಗೆ ಪೋಸ್ಟ್ ಆಫೀಸ್ ಹೊಸ ಯೋಜನೆ!
ಅರ್ಜಿ ಶುಲ್ಕದ ವಿವರ :
ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ನೋಡುವುದಾದರೆ,
- 500 ರೂಪಾಯಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ
- 300 ರೂಪಾಯಿ 2a 2b 3a 3b ಅಭ್ಯರ್ಥಿಗಳಿಗೆ
- 200 ರೂಪಾಯಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ
- ಅಂಗವಿಕಲ ಅಭ್ಯರ್ಥಿಗಳಿಗೆ ನೂರು ರೂಪಾಯಿ
ಹೀಗೆ ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಕೂಡ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ :
ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಶೈಕ್ಷಣಿಕ ವರ್ಷದಲ್ಲಿ ಅಭ್ಯರ್ಥಿಗಳು ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಒಂದು ಮೆರಿಟ್ ಮತ್ತು ರೋಸ್ಟರ್ ಪಟ್ಟಿಯನ್ನು ತಯಾರು ಮಾಡಿ ಅದರಲ್ಲಿ ಹೆಚ್ಚು ಅಂಕ ಪಡೆದುಕೊಂಡಿರುವಂತಹ ಅಭ್ಯರ್ಥಿಗಳನ್ನು ಕಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಪ್ರಮುಖ ದಿನಾಂಕಗಳು :
ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಪ್ರಮುಖ ದಿನಾಂಕಗಳನ್ನು ತಿಳಿದುಕೊಂಡಿರಬೇಕು.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 ಮಾರ್ಚ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಮೇ 2024
ಅರ್ಜಿ ಸಲ್ಲಿಸುವ ವಿಧಾನ :
ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟ್ ಲಿಂಕ್https://zptumakuru.karnataka.gov.in/uploads/media_to_upload1710489434.pdf
ಒಟ್ಟಾರೆ ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ವಿವಿಧ ಹುದ್ದೆಗಳು ಹಾಗೂ ವಿವಿಧ ವಿಭಾಗದಲ್ಲಿ ಇರುವಂತಹ ಕಾಲಿ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ವಾಹನ ಮಾಡಲಾಗುತ್ತಿದ್ದು ಇದೀಗ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ನೇರ ನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.
ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರಿಗೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇರ ನೇಮಕಾತಿಯ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಲು ತಿಳಿಸಿ ಧನ್ಯವಾದಗಳು.