ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸ್ವಂತ ಮನೆ ಹೊಂದುವವರಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಸ್ವಂತ ಮನೆ ಹೊಂದಬೇಕೆಂದುವ ಕನಸನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇದೀಗ ಹಾಗೂ ಉಚಿತವಾಗಿ ಮನೆಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಣೆ ಮಾಡುವುದು ಕೇಂದ್ರ ಸರ್ಕಾರದ ಮುಖ್ಯ ಗುರಿಯಾಗಿದೆ.
ದೇಶದಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಎಂದಿಗೂ ಕೂಡ ಬಾಡಿಗೆ ಮನೆಯಲ್ಲಿಯೇ ಅಥವಾ ಅಧಿಕೃತ ಜಾಗದಲ್ಲಿಯೇ ಸಣ್ಣ ಪುಟ್ಟ ಗುಡಿಸಿಲಿಗಳಲ್ಲಿ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ ಇವರಿಗೂ ಕೂಡ ಸ್ವಂತ ಮನೆ ಹೊಂದಿರಬೇಕೆ ಎನ್ನುವ ಕನಸನ್ನು ಹೊಂದಿರುತ್ತಾರೆ. ಆದರೆ ಅವರಿಗೆ ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಬೇಕಾಗುವಷ್ಟು ಆರ್ಥಿಕ ಪರಿಸ್ಥಿತಿ ಚೆನ್ನಾಗಿ ಇರುವುದಿಲ್ಲ
ಹಾಗಾಗಿ ಅವರು ಜೀವನ ಪರಿಯಂತ ಅಂತಹ ಮನೆಯಲ್ಲಿ ವಾಸಮಾಡಬೇಕಾಗುತ್ತದೆ ಆದರೆ ಇಂದು ಮುಂದೆ ಯಾವುದೇ ರೀತಿಯ ಚಿಂತೆ ಮಾಡುವ ಅಗತ್ಯವಿಲ್ಲ ಏಕೆಂದರೆ ಪ್ರತಿಯೊಬ್ಬ ಭಾರತೀಯ ನಿವಾಸಿಯು ಕೂಡ ಸ್ವಂತ ಮನೆ ಹೊಂದಿರಬೇಕೆನ್ನುವುದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ :
ಭಾರತದಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರು ಕೂಡ ಸ್ವಂತ ಮನೆಯನ್ನು ಹೊಂದಿರಬೇಕೆ ಎನ್ನುವ ಉದ್ದೇಶದಿಂದ ಹಾಗೂ ಬಡತನ ರೇಖೆಗಿಂತ ಕೆಳಗಿರುವವರಿಗೆ ಕೇಂದ್ರ ಸರ್ಕಾರ ಉಚಿತ ಮನೆಯನ್ನು ವಿತರಣೆ ಮಾಡಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ನಿರ್ಧರಿಸಿದೆ.
ಲಕ್ಷಾಂತರ ಕಾಂಕ್ರೀಟ್ ಮನೆಗಳನ್ನು ಕೂಡ ಈಗಾಗಲೇ ಕೇಂದ್ರ ಸರ್ಕಾರ ನಿರ್ಮಾಣ ಮಾಡಿಕೊಟ್ಟಿದೆ. ಇನ್ನು ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬೇಕೆ ಎನ್ನುವ ಕನಸನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ನಡೆಸು ಮಾಡಿಕೊಳ್ಳಬಹುದಾಗಿದೆ.
ಇದನ್ನು ಓದಿ : ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫರ್ಮರ್ ಕೃಷಿ ಭೂಮಿಯಲ್ಲಿದ್ದರೆ ಸರ್ಕಾರದಿಂದ ಹೊಸ ದೇಶ
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೊತ್ತ :
ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ಹಣವನ್ನು ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರ ಭಾಗಗಳಲ್ಲಿ ವಾಸಿಸುತ್ತಿರುವ ಜನರು ಮನೆ ನಿರ್ಮಾಣ ಮಾಡಿಕೊಳ್ಳಲು ಹಣವನ್ನು ಪಡೆಯಬಹುದಾಗಿದೆ. ಲಕ್ಷಾಂತರ ಮನೆಗಳನ್ನು ಗ್ರಾಮೀಣ ಭಾಗದಲ್ಲಿ ಮತ್ತು ನಗರ ಭಾಗದಲ್ಲಿ 2015ರಿಂದ ಇಲ್ಲಿಯವರೆಗೂ ನಿರ್ಮಾಣ ಮಾಡಲಾಗಿದೆ. 120,000ಗಳನ್ನು ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಹಾಗೂ 2,50,000ಗಳನ್ನು ನಗರ ಭಾಗದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರ ನೀಡುತ್ತದೆ.
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ ಅವುಗಳೆಂದರೆ
- ಭಾರತೀಯ ನಾಗರಿಕರಾಗಿರಬೇಕು.
- ಬಡತನ ರೇಖೆಗಿಂತ ಕೆಳಗಿನವರು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು.
- ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
- 5 ಎಕರೆ ಅಥವಾ ಅದಕ್ಕಿಂತ ಹೆಚ್ಚು ಸ್ವಂತ ಭೂಮಿಯನ್ನು ಅಭ್ಯರ್ಥಿಗಳು ಹೊಂದಿರಬಾರದು.
- ಕುಟುಂಬದಲ್ಲಿ ವಾಸಿಸುತ್ತಿರುವ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
- ತೆರಿಗೆ ಪಾವತಿ ಮಾಡುವವರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
- ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ಹೀಗೆ ಕೆಲವೊಂದು ಅರ್ಹತೆಗಳನ್ನು ಹೊಂದುವುದರ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಶಾಶ್ವತ ಮನೆ ನಿರ್ಮಾಣ ಮಾಡಿಕೊಳ್ಳಲು ಅಭ್ಯರ್ಥಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಹತ್ತಿರದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಸಬ್ಸಿಡಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವು ಪ್ರಮುಖ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
- ರೇಷನ್ ಕಾರ್ಡ್
- ವೋಟರ್ ಐಡಿ
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಸೈಜ್ ಫೋಟೋ
- ಬ್ಯಾಂಕ್ ಪಾಸ್ ಬುಕ್
ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಸ್ವಂತ ಮನೆ ಇಲ್ಲದವರಿಗೆ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಹಣವನ್ನು ನೀಡುತ್ತಿದ್ದು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಮನೆ ಇಲ್ಲದವರು ಹಾಗೂ ಬಾಡಿಗೆ ಮನೆಯಲ್ಲಿ ಇರುವವರು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ
- ಮಹಿಳೆಯರಿಗೆ ಹತ್ತಿರ ಈ ಕಾರ್ಡ್ ಇದ್ದರೆ ಸಿಗಲಿದೆ ಕೇಂದ್ರದಿಂದ ಉಚಿತ ಗ್ಯಾಸ್ ನೋಡಿ !
ಯಾರಿಗೆ ಸ್ವಂತ ಮನೆ ಸಿಗುತ್ತೆ ..?
ಬಡ ವರ್ಗದ ಜನರಿಗೆ ಸಿಗುತ್ತೆ .
ಯಾವ ಸರ್ಕಾರ ಯೋಜನೆ ಜಾರಿಗೆ ತಂದಿದೆ ..?
ಕೇಂದ್ರ ಸರ್ಕಾರ.