ಗ್ರಾಮ ಪಂಚಾಯಿತಿ ನೇರ ನೇಮಕಾತಿ : ಆಯ್ಕೆ ಆದವರಿಗೆ ಸಂಬಳ 63,000 ಸಿಗುತ್ತೆ

Gram Panchayat Direct Recruitment

ನಮಸ್ಕಾರ ಸ್ನೇಹಿತರೆ ಆಗಾಗ ವಿವಿಧ ಸಂಸ್ಥೆಗಳು ದೇಶದಲ್ಲಿ ಉದ್ಯೋಗಕ್ಕಾಗಿ ಅರ್ಜಿಯನ್ನು ಆಹ್ವಾನ ಮಾಡುತ್ತಿರುತ್ತವೆ. ಈ ಅವಕಾಶವನ್ನು ನಿರುದ್ಯೋಗಿಗಳು ಬಳಸಿಕೊಂಡು ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

Gram Panchayat Direct Recruitment
Gram Panchayat Direct Recruitment

ಇದೀಗ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯ ಸರ್ಕಾರ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಹಾಗಾದರೆ ಗ್ರಾಮ ಪಂಚಾಯಿತಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಈ ಹುದ್ದೆಗೆ ವೇತನ ಎಷ್ಟು? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಗ್ರಾಮ ಪಂಚಾಯಿತಿಯಲ್ಲಿ ಭರ್ಜರಿ ನೇಮಕಾತಿ :

ಒಟ್ಟು 22 ಹುದ್ದೆಗಳು ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಇದೀಗ ಖಾಲಿಯಿದ್ದು ಈ ಹುದ್ದೆಗಳ ನೇಮಕಾತಿಯನ್ನು ಇದೀಗ ರಾಜ್ಯ ಸರ್ಕಾರ ನಡೆಸುತ್ತಿದೆ. ಅದರಂತೆ ಯಾವ ಹುದ್ದೆ ಖಾಲಿ ಇದೆ ಎಂಬುದರ ಬಗ್ಗೆ ಮಾಹಿತಿಯನ್ನು ನೋಡುವುದಾದರೆ,

ನೇಮಕಾತಿ ಇಲಾಖೆಗ್ರಾಮ ಪಂಚಾಯಿತಿ
ಒಟ್ಟು ಖಾಲಿ ಇರುವ ಹುದ್ದೆಗಳು22
ಖಾಲಿ ಇರುವ ಹುದ್ದೆಯ ಹೆಸರು ಗ್ರಂಥಾಲಯ ಮೇಲ್ವಿಚಾರಕ
ಉದ್ಯೋಗದ ಸ್ಥಳವಿಜಯನಗರ
ಶೈಕ್ಷಣಿಕ ಅರ್ಹತೆ12ನೇ ತರಗತಿ
ವೇತನ ಶ್ರೇಣಿ 63,000

ಹೀಗೆ ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ಹುದ್ದೆಗಳು ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯನ್ನು ಪಡೆಯಬಹುದಾಗಿದೆ.

ಇದನ್ನು ಓದಿ : ಗ್ರಾಮ ಪಂಚಾಯಿತಿ PDO ಹುದ್ದೆಗಳಿಗೆ ಅರ್ಜಿ ಆಹ್ವಾನ : ತಕ್ಷಣ Apply ಮಾಡಿ ಇಲ್ಲಿದೆ ಲಿಂಕ್

ಶೈಕ್ಷಣಿಕ ಅರ್ಹತೆ :

ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥಾಪ ವಿಶ್ವವಿದ್ಯಾಲಯದಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾಗಿ ಇರಬೇಕು ಹಾಗೂ ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಅನ್ನು ಪೂರ್ಣಗೊಳಿಸಿರಬೇಕೆಂದು ವಿಜಯನಗರ ಗ್ರಾಮ ಪಂಚಾಯಿತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ವಯಸ್ಸಿನ ಮಿತಿ :

ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳ ಆಗಿರಬೇಕು. ಅಲ್ಲದೆ ವರ್ಗಗಳ ಆಧಾರದ ಮೇಲೆ ಅಭ್ಯರ್ಥಿಗಳು ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

  1. ಕೆಟಗರಿ ಟು ಎ ಟು ಬಿ ತ್ರೀ ಎ ತ್ರಿ ಬೀ ಅಭ್ಯರ್ಥಿಗಳಿಗೆ ಮೂರು ವರ್ಷ
  2. ಎಸ್ ಸಿ ಎಸ್ ಟಿ ಕೆಟಗರಿ ವನ್ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

ವೇತನ ಶ್ರೇಣಿ :

ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಮಾಸಿಕ ವೇತನ 19, 000 ದಿಂದ 63,000 ವರೆಗೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಸಂಬಂಧಿತ ಸ್ವಯಂ ದೃಢೀಕರಣ ದಾಖಲೆಗಳೊಂದಿಗೆ,

ಮೆಂಬರ್ ಸೆಕ್ರೆಟರಿ
ಸೆಲೆಕ್ಷನ್ ಕಮಿಟಿ ಅಂಡ್ ಡೆಪ್ಯೂಟಿ ಸೆಕ್ರೆಟರಿ
ಜಿಲ್ಲಾ ಪಂಚಾಯತ್ ವಿಜಯನಗರ
ಕಲೆಕ್ಟರ್ ಆಫೀಸ್ ಬಿಲ್ಡಿಂಗ್
ಟಿಬಿ ಡ್ಯಾಮ್ ರೋಡ್
ಹೊಸಪೇಟೆ 583225

ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟಾರೆ ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ವಿದ್ಯಾರ್ಹತೆ ಏನು ಆಗಿರಬೇಕು ..?

PUC ಪಾಸ್ ಆದವರು ಅರ್ಜಿ ಸಲ್ಲಿಸಿ.

ಉದ್ಯೋಗ ವಿಧ ಯಾವುದು …?

ಸರ್ಕಾರಿ ಖಾಯಂ ಉದ್ಯೋಗ.

Leave a Reply

Your email address will not be published. Required fields are marked *