ನಮಸ್ಕಾರ ಸ್ನೇಹಿತರೆ ಶೀಘ್ರದಲ್ಲಿ ವಿದ್ಯಾ ಪಿಯುಸಿ ಅಥವಾ 12ನೇ ತರಗತಿಯ ಫಲಿತಾಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಿಸುವ ನಿರೀಕ್ಷೆ ಇದೆ. ಲಭ್ಯವಿರುವಂತಹ ಮಾಹಿತಿಯ ಪ್ರಕಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮುಂದಿನ ವಾರ ಫಲಿತಾಂಶ ಹಾಗೂ ಸಮಯದ ಅಧಿಕೃತ ಪ್ರಕಟಣೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಮಾಡಲಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಲ್ಲಿ ಪರಿಶೀಲಿಸಬೇಕು ?
ಮಾರ್ಚ್ ಒಂದರಿಂದ ಮಾರ್ಚ್ 23ರ ವರೆಗೆ ಸುಮಾರು 7 ಲಕ್ಷ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಕರ್ನಾಟಕ ಸೆಕೆಂಡ್ ಪಿಯುಸಿ ಪರೀಕ್ಷೆಯನ್ನು ನಡೆಸಲಾಯಿತು.
ಮೌಲ್ಯಮಾಪನ ಕಾರ್ಯ ಮಾರ್ಚ್ 25ರಂದು ಪ್ರಾರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶವನ್ನು https://karresults.nic.in ಈ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತದೆ.
ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ನಕಲಿ ಸೂಚನೆ :
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಕೆಲ ದಿನಗಳ ಹಿಂದೆ ಕೆಎಸ್ಇಎಬಿ ಹೆಸರಿನಲ್ಲಿ ನಕಲಿಪತ್ರಿಕ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು ಹೇಳಿಕೆ ಪ್ರಕಾರ ಏಪ್ರಿಲ್ ಮೂರರಂದು ಸೆಕೆಂಡ್ ಪಿಯುಸಿ ಫಲಿತಾಂಶ ದಿನಾಂಕವನ್ನು ಉಲ್ಲೇಖಿಸಲಾಗಿದೆ.
ನಂತರ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶದ ದಿನಾಂಕವನ್ನು ದೃಢೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು ಮೌಲ್ಯಮಾಪನದ ಕಾರ್ಯ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ದಿನಾಂಕ ಮತ್ತು ಸಮಯವನ್ನು ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ನಿಗದಿಪಡಿಸಲಾಗುತ್ತದೆ ಎಂದು ಮಂಡಳಿಯು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಿಳಿಸಿದೆ.
ಇದನ್ನು ಓದಿ : ಕೃಷಿಭಾಗ್ಯ ಯೋಜನೆಯ ಸಬ್ಸಿಡಿ ರೈತರ ಖಾತೆಗೆ ಜಮಾ : ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ದ್ವಿತೀಯ ಪಿಯುಸಿ ಫಲಿತಾಂಶವನ್ನು ಡೌನ್ಲೋಡ್ ಮಾಡುವ ವಿಧಾನ :
ವಿದ್ಯಾರ್ಥಿಗಳು ವಿದ್ಯಾರ್ಥಿ ಫಲಿತಾಂಶವನ್ನು ತಿಳಿದುಕೊಳ್ಳಬೇಕಾದರೆ ಫಲಿತಾಂಶದ ದಿನಾಂಕದಂದು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://karresults.nic.in ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಕೆಲವೊಂದು ಹಂತಗಳನ್ನು ಅನುಸರಿಸಬೇಕಾಗುತ್ತದೆ.
- ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿಳಿದುಕೊಳ್ಳಲು ಲಿಂಕ್ ಓಪನ್ ಮಾಡಬೇಕು.
- ಅದಾದ ನಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ನಮೂದಿಸಿ
- ವಿಷಯ ಸಂಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬೇಕು
- ಆಯ್ಕೆ ಮಾಡಿಕೊಂಡ ನಂತರ ಲಾಗಿನ್ ಆಗಿ ಸ್ಕೋರ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಬಹುದಾಗಿದೆ.
ಶೀಘ್ರದಲ್ಲಿಯೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ :
ವಿದ್ಯಾರ್ಥಿಗಳು ವಿದ್ಯಾರ್ಥಿ ಫಲಿತಾಂಶವನ್ನು ಶೀಘ್ರದಲ್ಲಿಯೇ ಪಡೆದುಕೊಳ್ಳಬಹುದಾಗಿತ್ತು ಕೆ ಎಸ್ ಇ ಎ ಬಿ ಶೀಘ್ರದಲ್ಲಿಯೇ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕ ಮತ್ತು ಸಮಯದ ಬಗ್ಗೆ ಅಧಿಕೃತ ಅಧಿ ಸೂಚನೆಯನ್ನು ಹೊರಡಿಸುತ್ತದೆ.
ಮುಂದಿನ ವಾರ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದು ಮೂಲಗಳ ಪ್ರಕಾರ ತಿಳಿಸಲಾಗಿದೆ ಒಮ್ಮೆ ಘೋಷಣೆ ಮಾಡಿದ ನಂತರ ತಮ್ಮ ಅಂಕಪಟ್ಟಿಗಳನ್ನು ವಿದ್ಯಾರ್ಥಿಗಳು https://karresults.nic.in ಈ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು.
ಒಟ್ಟಾರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಶೀಘ್ರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಣೆ ಮಾಡುತ್ತದೆ ಎಂದು ಕೆಲವೊಂದು ಮೂಲಗಳು ತಿಳಿಸಿದ ನಂತರವೇ ತಿಳಿದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.