ಬೆಂಗಳೂರು : ಮೇ 8 ಕ್ಕೆ ನಿಗದಿಯಾಗಿದ್ದ 402 PSI ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೂ ಟ್ವೀಟ್ ಮಾಡಿದೆ.
402 PSI ಹುದ್ದೆಗಳ ನೇಮಕಾತಿಯನ್ನು ಮೇ 8 ಕ್ಕೆ ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ. ಮುಂದಿನ ಪರೀಕ್ಷೆ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಟ್ವೀಟ್ ಮೂಲಕ ಮಾಹಿತಿಯನ್ನು ನೀಡಿದೆ.
ಸರ್ಕಾರದ ಆದೇಶದ ಸಂಖ್ಯೆ OE 22 PEI 2024 ದಿನಾಂಕ 22-02-2024 ರನ್ವಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ. ಅದರಂತೆ ದಿನಾಂಕ 08.05.2024 ರಂದು ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ.
ಮಹಿಳೆ ಮತ್ತು ಮಕ್ಕಳಿಗೆ ಪೋಸ್ಟ್ ಆಫೀಸ್ ಹೊಸ ಯೋಜನೆ!
ಆದರೆ ದೇಶಾದ್ಯಂತ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ, ನೀತಿ ಸಂಹಿತೆಯು ಜಾರಿಗೆ ಬಂದ ಕಾರಣ ದಿನಾಂಕ 08.05.2024 ತೀರ್ಮಾನಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯನ್ನು ಹೊರಡಿಸಿದ್ದಾರೆ.
ಇತರೆ ವಿಷಯಗಳು:
SBI ಡೆಬಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಅಪ್ಡೇಟ್! ಏಪ್ರಿಲ್ 1 ರಿಂದ ಹೊಸ ನಿಯಮಗಳು
ಕೇಂದ್ರದಿಂದ ಮಹಿಳೆಯರಿಗೆ 2 ಉಚಿತ ಗ್ಯಾಸ್ ಸಿಲಿಂಡರ್; ಈ ರೀತಿ ಅರ್ಜಿ ಸಲ್ಲಿಸಿ